2018ರ ಚುನಾವಣೆಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ | ಭವಾನಿ ರೇವಣ್ಣ ಸ್ಪಷ್ಟನೆ | Oneindia Kannada

2018ರ ಚುನಾವಣೆಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ | ಭವಾನಿ ರೇವಣ್ಣ ಸ್ಪಷ್ಟನೆ | Oneindia Kannada

Prajwal Revanna will contest Assembly Election 2018 said his mother Bhavani Revanna. JDs Supremo HD Devde Gowda will decide on from which constituency Prajwal Revanna should contest. br br ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತಪಡಿಸಿದ ಭವಾನಿ ರೇವಣ್ಣ. ಮಾಜಿ ಪ್ರಧಾನಿ ಎಚ್​. ಡಿ ದೇವೆಗೌಡರ ಮೊಮ್ಮಗ ಮತ್ತು ಎಚ್​.ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಬಗ್ಗೆ ಪ್ರಜ್ವಲ್ ಅವರ ತಾಯಿ ಭವಾನಿ ಅವರು ಸುಳಿವು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ. ಆದರೆ, ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ. ಮನೆಯಲ್ಲಿ ಯಾವುದೇ ಶುಭ ಕಾರ್ಯ ಮಾಡುವ ಮುನ್ನ ಕುಲ ದೇವರಿಗೆ ಪೂಜೆ ಮಾಡಿಸುವುದು ರೂಢಿ. ಅದರಂತೆ, ಪೂಜೆ ಸಲ್ಲಿಸಿದ ಬಳಿಕ ಈ ಬಗ್ಗೆ ಹೇಳುತ್ತಿದ್ದೇನೆ. ಪ್ರಜ್ವಲ್ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಅವರು ನಿರ್ಧರಿಸಲಿದ್ದಾರೆ ಎಂದು ಭವಾನಿ ರೇವಣ್ಣ ಅವರು ಹೇಳಿದರು.


User: Oneindia Kannada

Views: 309

Uploaded: 2017-11-06

Duration: 01:34

Your Page Title