ಕಾಂಗ್ರೆಸ್ಸಿಗೆ ಆನಂದ್ ಸಿಂಗ್, ಬಿಜೆಪಿಗೆ ಡಿಕೆಶಿ ಟಾಂಗ್ | Oneindia Kannada

ಕಾಂಗ್ರೆಸ್ಸಿಗೆ ಆನಂದ್ ಸಿಂಗ್, ಬಿಜೆಪಿಗೆ ಡಿಕೆಶಿ ಟಾಂಗ್ | Oneindia Kannada

ಮಾಜಿ ಸಚಿವ, ವಿಜಯನಗರ ಕ್ಷೇತ್ರದ ಮಾಜಿ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರಿದರು. ಶನಿವಾರ ಅವರು ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಸಮ್ಮುಖದಲ್ಲಿ ಆನಂದ್ ಸಿಂಗ್ ತಮ್ಮ ಬೆಂಬಲಿಗರ ಜೊತೆ ಪಕ್ಷ ಸೇರ್ಪಡೆಯಾದರು. br br ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತ ಬಯಸಿ ಬರುವವರಿಗೆ ಸ್ವಾಗತ. ಸಾಮಾಜಿಕ ನ್ಯಾಯ, ಸೌಹಾರ್ದ ತತ್ವದಲ್ಲಿ ನಂಬಿಕೆ ಹೊಂದಿರುವವರು ಬಿಜೆಪಿಯಲ್ಲಿರುವ ಸಾಧ್ಯವಿಲ್ಲ' ಎಂದು ಹೇಳಿದರು. br br ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, 'ಚುನಾವಣೆ ಹತ್ತಿರವಾಗುವಾಗ ಇನ್ನಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ' ಎಂದು ಹೊಸ ಬಾಂಬ್ ಸಿಡಿಸಿದರು.ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕಾಗಿದ್ದ ಆನಂದ್ ಸಿಂಗ್ ಜನಾರ್ದನ ರೆಡ್ಡಿ, ಶ್ರೀರಾಮುಲು ಅವರ ಪರಮಾಪ್ತರಾಗಿದ್ದರು. br br br Vijayanagara (Hospet) assembly constituency Former MLA Anand Singh joind Congress in the presence of Chief Minister Siddaramaiah and KPCC president Dr.G.Parameshwara.


User: Oneindia Kannada

Views: 642

Uploaded: 2018-01-31

Duration: 02:09

Your Page Title