ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬುಕಿಂಗ್‌ಗಳನ್ನು ಪುನರಾರಂಭಿಸಿದ ಬಜಾಜ್ ಆಟೋ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬುಕಿಂಗ್‌ಗಳನ್ನು ಪುನರಾರಂಭಿಸಿದ ಬಜಾಜ್ ಆಟೋ

ಬಜಾಜ್ ಆಟೋ ಕಂಪನಿಯು ತನ್ನ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ ಬುಕಿಂಗ್‌ಗಳನ್ನು ಪುನರಾರಂಭಿಸಿದೆ. ಕಂಪನಿಯು ತನ್ನ ಆನ್‌ಲೈನ್ ಪೋರ್ಟಲ್ ಮೂಲಕ ಚೇತಕ್ ಎಲೆಕ್ಟ್ರಿಕ್ ಸ್ಕೂಟರಿನ br ಬುಕಿಂಗ್‌ಗಳನ್ನು ಸ್ವೀಕರಿಸುತ್ತಿದೆ. ಸ್ಕೂಟರ್‌ಗಳ ವಿತರಣೆ ಶೀಘ್ರದಲ್ಲೇ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ.br br ಈ ವರ್ಷದ ಜನವರಿ ತಿಂಗಳಿನಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಹಂತ br ಹಂತವಾಗಿ ಭಾರತದ ವಿವಿಧ ನಗರಗಳಿಗೆ ವಿಸ್ತರಿಸುತ್ತಿದೆ. ಮೊದಲಿಗೆ ಈ ಸ್ಕೂಟರಿನ ಮಾರಾಟವನ್ನು ಪುಣೆ ಹಾಗೂ ಬೆಂಗಳೂರಿನಲ್ಲಿ ಆರಂಭಿಸಲಾಯಿತು. br br ಬಜಾಜ್ ಕಂಪನಿಯು ಲಾಕ್‌ಡೌನ್ ಅವಧಿಯಲ್ಲಿ ತನ್ನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು. br ಲಾಕ್‌ಡೌನ್‌ನಿಂದ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ.


User: DriveSpark Kannada

Views: 48

Uploaded: 2020-06-17

Duration: 02:49

Your Page Title