ಹಳೆಯ ವಾಹನಗಳಿಗಾಗಿ ಸ್ಕ್ರ್ಯಾಪೇಜ್ ನೀತಿ ಪ್ರಕಟಿಸಿದ ಕೇಂದ್ರ ಹಣಕಾಸು ಸಚಿವರು

ಹಳೆಯ ವಾಹನಗಳಿಗಾಗಿ ಸ್ಕ್ರ್ಯಾಪೇಜ್ ನೀತಿ ಪ್ರಕಟಿಸಿದ ಕೇಂದ್ರ ಹಣಕಾಸು ಸಚಿವರು

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಹಳೆಯ ವಾಹನಗಳಿಗಾಗಿ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಕಟಿಸಿದ್ದಾರೆ. ಈ ಸ್ಕ್ರ್ಯಾಪೇಜ್ ನೀತಿಯನ್ವಯ ಎಲ್ಲಾ ಹಳೆಯ ಹಾಗೂ ಅನುಪಯುಕ್ತ ವಾಹನಗಳನ್ನು ಹೊರಹಾಕಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. br br ಹೊಸ ನೀತಿಯು ಹೆಚ್ಚು ಇಂಧನ ದಕ್ಷತೆಯುಳ್ಳ ಹಾಗೂ ಪರಿಸರ ಸ್ನೇಹಿ ವಾಹನಗಳ ಮಾರಾಟ ಹಾಗೂ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ ಪೆಟ್ರೋಲ್ ಡೀಸೆಲ್ ಮೇಲೆ ವ್ಯಯಿಸುವ ಹಣವನ್ನು ಉಳಿಸುತ್ತದೆ. br br ವೈಯಕ್ತಿಕ ಹಾಗೂ ವಾಣಿಜ್ಯ ವಾಹನಗಳ ಫಿಟ್‌ನೆಸ್ ಪರೀಕ್ಷೆಗಳ ಆಧಾರದ ಮೇಲೆ ಹೊಸ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ರೂಪಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದ್ದಾರೆ. br br ವಾಹನಗಳ ಸ್ಕ್ರ್ಯಾಪೇಜ್ ನೀತಿಯ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.


User: DriveSpark Kannada

Views: 14.2K

Uploaded: 2021-02-04

Duration: 01:26

Your Page Title