ತಿರುಮಲ ದೇವಸ್ಥಾನದ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಅವಘಡ: ವಿಡಿಯೋ

ತಿರುಮಲ ದೇವಸ್ಥಾನದ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಅವಘಡ: ವಿಡಿಯೋ

pತಿರುಪತಿ(ಆಂಧ್ರ ಪ್ರದೇಶ): ತಿರುಮಲದ ವೆಂಕಟೇಶ್ವರ ದೇವಸ್ಥಾನದ 47ನೇ ಲಡ್ಡು ವಿತರಣಾ ಕೌಂಟರ್‌ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಂಪ್ಯೂಟರ್‌ಗೆ ಹೊಂದಿಕೊಂಡಿದ್ದ ಯುಪಿಎಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಉಂಟಾದ ಕಾರಣ ಬೆಂಕಿ ಹೊತ್ತಿಕೊಂಡು, ದಟ್ಟವಾದ ಹೊಗೆ ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸಿ ಭಾರಿ ಅನಾಹುತ ತಪ್ಪಿಸಿದ್ದಾರೆ.ppಬೆಂಕಿ ಕಾಣಿಸಿಕೊಂಡ ಕಾರಣ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಓಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಎಂದು ತಿಳಿದುಬಂದಿದೆ.ppಕಾಲ್ತುಳಿತದಲ್ಲಿ ಐವರು ಮಹಿಳೆಯರು ಸೇರಿ 6 ಭಕ್ತರು ಸಾವು: ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ನಡೆದಿತ್ತು. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್​​ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಎರಡು ಸ್ಥಳಗಳಲ್ಲಿ ನಡೆದ ಕಾಲ್ತುಳಿತದಲ್ಲಿ ಐವರು ಮಹಿಳಾ ಭಕ್ತರು ಸೇರಿ 6 ಮಂದಿ ಸಾವಿಗೀಡಾಗಿದ್ದರು. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ppಸರ್ವದರ್ಶನ ಟಿಕೆಟ್​​ಗಾಗಿ ಭಕ್ತರು ವಿತರಣಾ ಕೇಂದ್ರಗಳತ್ತ ಒಮ್ಮೆಲೇ ನುಗ್ಗಿ ಬಂದ ಕಾರಣ, ಕಾಲ್ತುಳಿತ ಉಂಟಾಗಿತ್ತು. ಇದರಿಂದ ಹಲವು ಭಕ್ತರು ಕೆಳಗೆ ಬಿದ್ದು ಗಾಯಗೊಂಡಿದ್ದರು. ಮೃತ ಭಕ್ತರಲ್ಲಿ ತಮಿಳುನಾಡಿನ ಸೇಲಂ ಮೂಲದ ಮಹಿಳೆ ಕೂಡ ಇದ್ದರು.


User: ETVBHARAT

Views: 0

Uploaded: 2025-01-13

Duration: 01:36

Your Page Title