'ಈ ರೀತಿಯಾದರೆ ನಮಗೆ ಆತ್ಮಹತ್ಯೆ ಒಂದೇ ದಾರಿ': ದ್ವಿಚಕ್ರ ವಾಹನ, ತರಕಾರಿ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

'ಈ ರೀತಿಯಾದರೆ ನಮಗೆ ಆತ್ಮಹತ್ಯೆ ಒಂದೇ ದಾರಿ': ದ್ವಿಚಕ್ರ ವಾಹನ, ತರಕಾರಿ ಅಂಗಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

pಬೆಂಗಳೂರು: ನಗರದ ಹಲಸೂರು ಮಾರುಕಟ್ಟೆಯ ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಹಾಗೂ ಒಂದು ತರಕಾರಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.ppಹೆಲ್ಮೆಟ್, ಮಾಸ್ಕ್‌ನಿಂದ ಮುಖ ಮುಚ್ಚಿಕೊಂಡು ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಲಸೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.pp"ಎರಡನೇ ಬಾರಿ ಇಂಥ ಕೃತ್ಯ ಎಸಗಿದ್ದಾರೆ. ಅಂದಾಜು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ತರಕಾರಿಗಳು ಸುಟ್ಟು ಭಸ್ಮವಾಗಿವೆ. 40 ವರ್ಷಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಾ ಜೀವನ ಸಾಗಿಸುತ್ತಿದ್ದೇವೆ. ನಾವು ಯಾರಿಗೂ ಅನ್ಯಾಯ ಮಾಡಿಲ್ಲ. ನಮಗೆ ಯಾರ ಮೇಲೂ ಅನುಮಾನವಿಲ್ಲ. ಆದರೆ, ಯಾರೋ ಉದ್ದೇಶಪೂರ್ವಕವಾಗಿ ಈ ಕೆಲಸ ಎಸಗಿದ್ದಾರೆ. ಈ ರೀತಿ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ನಮಗೆ ಉಳಿದಿರುವ ಮಾರ್ಗ" ಎಂದು ತರಕಾರಿ ವ್ಯಾಪಾರಿ ಮಹಾಲಿಂಗಪ್ಪ ಬೇಸರದಿಂದ ನುಡಿದರು.


User: ETVBHARAT

Views: 12

Uploaded: 2025-07-28

Duration: 01:35

Your Page Title