ಮೈಸೂರು: ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆ

ಮೈಸೂರು: ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆ

pಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪದ ಮಹದೇವನಗರ ಗ್ರಾಮದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ನಂತರ ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದು ಸುರಕ್ಷಿತವಾದ ಪ್ರದೇಶಕ್ಕೆ ಬಿಟ್ಟಿದ್ದಾರೆ. ppಮಹದೇವನಗರದ ಗ್ರಾಮದಲ್ಲಿ ದನಗಾಹಿಗಳು ಕುರಿ, ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಕೂಡಲೇ ದನಗಾಹಿಗಳು ಗ್ರಾಮಸ್ಥರ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉರಗಪ್ರೇಮಿ ಸಂಜಯ್ ಪಾಟೀಲ್ ಅವರು ಹೆಬ್ಬಾವು ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ppಜೋಳದ ಹೊಲದಲ್ಲಿ ಭಾರಿ ಗಾತ್ರದ ಹೆಬ್ಬಾವು ರಕ್ಷಣೆ : ಕೆಲದಿನಗಳ ಹಿಂದೆ ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರಿಯ ಉದ್ಯಾನವನಕ್ಕೆ ಬಿಟ್ಟಿದ್ದರು. ppನಾಗರಹೊಳೆ ರಾಷ್ಟ್ರಿಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ತಮ್ಮ ಹೊಲದಲ್ಲಿ ಹೆಬ್ಬಾವು ಕಂಡೊಡನೆ ರೈತ ಮುನಿಕುಮಾರ್‌ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ವೀರನಹೊಸಹಳ್ಳಿ ವನ್ಯಜೀವಿ ವಲಯದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ಸುರಕ್ಷಿತವಾಗಿ ಬಲೆಯಲ್ಲಿ ಬಂಧಿಸಿದ್ದರು. ನಂತರ ಅದನ್ನು ನಾಗರಹೊಳೆ ಉದ್ಯಾನಕ್ಕೆ ಸಾಗಿಸಿದ್ದರು.


User: ETVBHARAT

Views: 437

Uploaded: 2025-12-06

Duration: 01:35